Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:19 - ಕನ್ನಡ ಸತ್ಯವೇದವು C.L. Bible (BSI)

19 ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕ್ರಿಸ್ತಾ ವೈನಾ ಸಗ್ಳೊ ಜಗ್ ದೆವಾನ್ ಅಪ್ನಾಕ್ಡೆ ರಾಜಿ ಹೊಯ್ ಸರ್ಕೊ ಕರ್‍ಲ್ಯಾನಾಯ್. ಮಾನ್ಸಾಂಚಿ ಪಾಪಾ ತೆಂಚ್ಯಾ ವಿರೊದ್ ಲೆಕ್ಕಾತ್ ಧರಿನಸ್ತಾನಾ, ಅಪ್ನಾಕ್ಡೆ ಎಕ್ ಕರ್‍ಲಾ ಮನ್ತಲಿ ಬರಿ ಖಬರ್ ಪರ್ಗಟ್ ಕರ್‍ತಲಿ ಜವಾಬ್ದಾರಿ ತೆನಿ ಅಮ್ಚ್ಯಾ ತಾಬೆತ್ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:19
16 ತಿಳಿವುಗಳ ಹೋಲಿಕೆ  

ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ಅದು ಸದಾ ಹಾಗೆಯೇ ಇರುತ್ತಿತ್ತು. ಆ ಮೇಘ ದೇವಸ್ಥಾನವನ್ನು ಆವರಿಸಿಕೊಳ್ಳುತ್ತಿತ್ತು; ರಾತ್ರಿವೇಳೆಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು