Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:4 - ಕನ್ನಡ ಸತ್ಯವೇದವು C.L. Bible (BSI)

4 ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹ್ಯಾ ಜಗಾಚ್ಯಾ ಬಿರಾಡಾತ್ ರ್‍ಹಾತಾನಾ, ಅಮಿ ಉಸ್ಕಾರ್ತಾವ್ ಅನಿ ಚಿಂತೆನ್ ಭರುನ್ ರ್‍ಹಾತಾಂವ್. ಜಾಲ್ಯಾರ್ಬಿ ಅಮ್ಕಾ ಆಮ್ಚೆ ಆಂಗ್ ನಾಗ್ಡೆ ಕರಲ್ಲೆ ಬಗುಕ್ ನಕ್ಕೊ; ಅಮ್ಚ್ಯಾ ವರ್‍ತಿ ನ್ಹವೆ ನೆಸಾಪ್ ನೆಸುಕ್ ಮಟ್ಲ್ಯಾರ್ ಸರ್ಗಾಚೆ ನೆಸಾಪ್, ತೆ ನಾಸ್ ಹೊತಲೆ ಬದ್ಲುನ್ ಶಾಶ್ವತ್ ಜಿವನ್ ಹೊವ್ನ್ ಬದಲ್ತಾ, ತೆ ನೆಸುಚೆ ಮನ್ತಲಿಚ್ ಅಮ್ಚಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:4
8 ತಿಳಿವುಗಳ ಹೋಲಿಕೆ  

ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ನಾನು ಈ ದೇಹವೆಂಬ ಗುಡಾರದಲ್ಲಿ ಜೀವಿಸಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ, ಪ್ರೋತ್ಸಾಹಿಸುವುದು ಉಚಿತವೆಂದು ಎಣಿಸಿದ್ದೇನೆ.


ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ಇಗೋ, ಕೇಳೀ! ಇದುವರೆಗೂ ನಿಗೂಢವಾಗಿದ್ದ ರಹಸ್ಯವನ್ನು ನಾನು ನಿಮಗೆ ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಅಂತಿಮ ಕಹಳೆಯು ಮೊಳಗಿದಾಗ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರಲ್ಲಿ ನಾವೆಲ್ಲರೂ ಮಾರ್ಪಡುವೆವು. ಹೌದು, ಕಹಳೆ ಮೊಳಗುವುದು. ಸತ್ತವರು ಪುನರುತ್ಥಾನಹೊಂದಿ ಅಮರರಾಗುವರು ಮತ್ತು ನಾವು ಮಾರ್ಪಡುವೆವು.


ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು