Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:8 - ಕನ್ನಡ ಸತ್ಯವೇದವು C.L. Bible (BSI)

8 ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮ್ಚೊ ಧೈರೊ ವಿಶೆಸ್, ತಸೆಮನುನ್ ಅಮ್ಚೆ ಹೆ ಆಂಗಾಚೆ ಬಿರಾಡ್ ಸೊಡುನ್ ಧನಿಯಾಚ್ಯಾ ಘರಾತ್ ಜಾವ್ನ್ ರ್‍ಹಾತಲೆ ಬರೆ ಮನುನ್ ಅಮ್ಕಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:8
22 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೇ ನಾವು ಸದಾ ಸ್ಥಿರಚಿತ್ತರಾಗಿದ್ದೇವೆ. ಈ ದೇಹವನ್ನೇ ನೆಚ್ಚಿ ಇದರಲ್ಲೇ ನೆಲೆಯಾಗಿರುವವರೆಗೂ ನಾವು ಪ್ರಭುವಿನಿಂದ ದೂರವಿರುವ ಪ್ರವಾಸಿಗಳಂತೆ ಇದ್ದೇವೆ.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು