Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:15 - ಕನ್ನಡ ಸತ್ಯವೇದವು C.L. Bible (BSI)

15 ಕ್ರಿಸ್ತಯೇಸುವಿಗೂ ಸೈತಾನನಿಗೂ ಎಲ್ಲಿಯ ನಂಟು? ವಿಶ್ವಾಸಿಗೂ ಅವಿಶ್ವಾಸಿಗೂ ಎಲ್ಲಿಯ ಸಹವಾಸ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬೆಳಕಿಗೂ ಕತ್ತಲೆಗೂ ಐಕ್ಯವೇನು? ಕ್ರಿಸ್ತನಿಗೂ ಸೈತಾನನಿಗೂ ಒಡನಾಟವೇನು? ನಂಬುವವನಿಗೂ ನಂಬದೆ ಇರುವವನಿಗೂ ಪಾಲುಗಾರಿಕೆ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸುವಿಗೂ ಪಿಶಾಚನಿಗೂ ಐಕ್ಯತೆಯೇನು? ಅಥವಾ ಕ್ರಿಸ್ತ ವಿಶ್ವಾಸಿಗೂ ಅವಿಶ್ವಾಸಿಗೂ ಹುದುವಾಗಿರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕ್ರಿಸ್ತಾನ್ ಅನಿ ಮ್ಹಾರ್ವಾನ್ ಕಶೆ ಎಕಾಮೆಕಾ ವಾಂಗ್ಡಾ ರ್‍ಹಾವ್ಕ್ ತಯಾರ್ ಹೊವ್ಕ್ ಹೊತಾ? ವಿಶ್ವಾಸಿ ಲೊಕಾ ವಿಶ್ವಾಸ್ ನಸಲ್ಲ್ಯಾಂಚ್ಯಾ ವಾಂಗ್ಡಾ ಕಶೆ ಭಾಗ್ ಘೆವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:15
14 ತಿಳಿವುಗಳ ಹೋಲಿಕೆ  

ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ಅದಕ್ಕೆ ಪೇತ್ರನು, “ನಿನ್ನ ಹಣಕಾಸು ನಿನ್ನೊಂದಿಗೆ ಹಾಳಾಗಿಹೋಗಲಿ; ದೇವರ ವರವನ್ನು ಹಣಕ್ಕೆ ಕೊಳ್ಳಬೇಕೆಂದಿರುವೆಯಾ?


ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ಆಗ ಜೆರುಬ್ಬಾಬೆಲ್, ಯೇಷೂವ ಹಾಗು ಬೇರೆ ಇಸ್ರಯೇಲ್ ಗೋತ್ರಪ್ರಧಾನರು ಅವರಿಗೆ, “ನಮ್ಮ ದೇವರ ಆಲಯವನ್ನು ಕಟ್ಟುವುದರಲ್ಲಿ ನೀವು ನಮ್ಮೊಡನೆ ಸೇರಲೇಕೂಡದು; ಪರ್ಷಿಯರಾಜ ಸೈರಸನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಲಯವನ್ನು ಕಟ್ಟಬೇಕು,” ಎಂದು ಉತ್ತರಕೊಟ್ಟರು.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಯೇಲರ ಮಧ್ಯೆಯಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ,” ಎಂದು ಹೇಳಿಸಿದರು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ?


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು