Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:17 - ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಹೊವ್ನ್ ಧನಿ ಮನ್ತಾ, “ತೆಚೆಸಾಟ್ನಿ ತೆಂಚ್ಯಾ ಮದ್ನಾ ತುಮಿ ಭಾಯ್ರ್ ಯೆವಾ, ತೆಂಚೆಕ್ನಾ ತುಮ್ಕಾಚ್ ಎಗ್ಳೆ ಕರಾ ಮನ್ತಾ ಸರ್ವೆಸ್ವರ್, ಜೆ ಕಾಮ್ ನಿತಳ್ ನಾ ತೆಕಾ ಹಾತ್ ಲಾವುನಕಾಶಿ, ತನ್ನಾ ಮಿಯಾ ತುಮ್ಕಾ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:17
16 ತಿಳಿವುಗಳ ಹೋಲಿಕೆ  

ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.


“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ಕ್ರಿಸ್ತಯೇಸು ನಿಮ್ಮನ್ನು ಅಂಗೀಕರಿಸಿದಂತೆ ದೇವರ ಮಹಿಮೆಗಾಗಿ ನೀವು ಸಹ ಒಬ್ಬರನ್ನು ಒಬ್ಬರು ಅಂಗೀಕರಿಸಿರಿ.


ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥದ್ದಾದರೆ ಅದರ ಮಾಂಸವನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು