Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:4 - ಕನ್ನಡ ಸತ್ಯವೇದವು C.L. Bible (BSI)

4 ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಪ್ರತಿಯೊಂದು ವಿಷಯದಲ್ಲಿಯೂ ನಾವು ದೇವರ ಸೇವಕರೆಂಬುದನ್ನು ತೋರ್ಪಡಿಸುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹೆಚ್ಯಾ ಬದ್ಲಾಕ್ ದೆವಾಚ್ಯಾ ಸೆವಕಾಂಚ್ಯಾ ಸಗ್ಳ್ಯಾ ವಾಟೆನ್ ಅಮಿ ಅಮ್ಕಾಚ್ ತರಾಸಾತ್ನಿ ದಿತಾಂವ್, ಸಂಕಟಾತ್, ಗರಜೆತ್ ಹೊತ್ತೆ ತನ್ನಾ, ಅಡ್ಚನಿತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:4
48 ತಿಳಿವುಗಳ ಹೋಲಿಕೆ  

ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ನಿಜವಾದ ಪ್ರೇಷಿತನ ಲಕ್ಷಣಗಳಾದ ಕಷ್ಟಸಹಿಷ್ಣುತೆ, ಸೂಚಕಕಾರ್ಯ, ಅದ್ಭುತಕಾರ್ಯ, ಮಹತ್ಕಾರ್ಯ ಇವುಗಳನ್ನೆಲ್ಲಾ ನಿಮ್ಮ ಮುಂದೆ ಪ್ರದರ್ಶಿಸಲಾಗಿದೆ.


ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದ್ದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.


ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ನಿಮ್ಮಲ್ಲಿ ಆಧ್ಯಾತ್ಮಿಕ ಬೀಜವನ್ನು ಬಿತ್ತನೆಮಾಡಿದ ನಾವು ಪ್ರತಿಫಲವಾಗಿ ದೈನಂದಿನ ಅಗತ್ಯಗಳನ್ನು ಅಪೇಕ್ಷಿಸುವುದು ಅತಿಯಾಯಿತೇ?


ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು.


ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.


ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.


“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು