Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:5 - ಕನ್ನಡ ಸತ್ಯವೇದವು C.L. Bible (BSI)

5 ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೊಂಬಿ, ಕಲಹ, ಸೆರೆಮನೆ, ಶಿಕ್ಷೆ ಇವುಗಳನ್ನು ಅನುಭವಿಸಿದ್ದೇವೆ. ಮೈಮುರಿದು ಕೆಲಸ ಮಾಡಿದ್ದೇವೆ. ನಿದ್ದೆಗೆಟ್ಟು ಬಳಲಿದ್ದೇವೆ; ಹಸಿವಿನಲ್ಲಿ ಸೊರಗಿದ್ದೇವೆ; ಈ ಎಲ್ಲಾ ವಿಷಯಗಳಲ್ಲಿ ಬಹು ಸಮಾಧಾನವನ್ನು ತೋರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಮಾರ್ ಖಾತಾನಾ, ಬಂದಿಖಾನ್ಯಾತ್ ಪಡಲ್ಲ್ಯಾ ತನ್ನಾ, ಡಂಗೊ ಉಟಲ್ಲ್ಯಾ ತನ್ನಾ, ಅಮಿ ನಿಜ್ ಅನಿ ಜೆವಾನ್ ನಸ್ತಾನಾ ಘಟ್ ಕಾಮ್ ಕರ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:5
48 ತಿಳಿವುಗಳ ಹೋಲಿಕೆ  

ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ಯೇಸುಕ್ರಿಸ್ತರ ಸಲುವಾಗಿಯೇ ನಾನು ಸೆರೆಯಲ್ಲಿರುವುದೆಂದು ಇಲ್ಲಿಯ ಅರಮನೆಯ ಕಾವಲಾಳುಗಳಿಗೂ ಇತರರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.


ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು.


ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.


ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ . ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ.


ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.


“ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.


ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.


ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು;


ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಸರ್ವೇಶ್ವರ ಎರಡನೆಯ ವಾಕ್ಯವನ್ನು ಅನುಗ್ರಹಿಸಿದರು.


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಪೆಟ್ಟುಗಳ ಶಿಕ್ಷೆ ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು