Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಪ್ರಿತಿಚ್ಯಾ ಭಾವಾ ಅನಿ ಭೆನಿಯಾನು, ಅಸ್ಲಿ ಗೊಸ್ಟಿಯಾ ಅಮ್ಕಾ ಗಾವಲ್ಲಿ ಹಾತ್ ತಸೆಮನುನ್ ಆಂಗ್ ಅನಿ ಆತ್ಮ್ಯಾಚ್ಯಾ ಸಗ್ಳ್ಯಾ ಬುರ್ಶೆಪಾನಾತ್ನಾ ಅಮಿ ಅಮ್ಕಾಚ್ ಪವಿತ್ರ್ ಕರುನ್ ಘೆವ್ವಾ, ಅನಿ ದೆವಾಚ್ಯಾ ಭಿಂಯಾನ್ ಅಮಿ ಅಮ್ಕಾಚ್ ಒಪ್ಸುನ್ ದಿಲ್ಲೆ ಪುರಾ ಕರುವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:1
48 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.


ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


“ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?


ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II


“ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.


ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.


ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ.


ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ತೊಳೆದ ನಂತರ ಆ ಮಚ್ಚೆ ಕಾಣದೆ ಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು