Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:10 - ಕನ್ನಡ ಸತ್ಯವೇದವು C.L. Bible (BSI)

10 ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾಚ್ಯಾ ಇಚ್ಚಾ ಸಾರ್ಕೆ ಸೊಸಲ್ಲೊ ದುಖ್ ಮನಾತ್ ಪಶ್ಚಾತಾಪ್ ಹೊಯ್ ಸರ್ಕೆ ಕರ್‍ತಾ ಅನಿ ತೆಕಾ ಸುಟ್ಕಾ ದಿವ್ಕ್ ಕಾರನ್ ಹೊತಾ. ಅನಿ ಹ್ಯಾತುರ್ ಕಸ್ಲೊಬಿ ಬೆಜಾರ್ ಮನ್ತಲೊ ನಾ. ಖರೆ ಜಗಾಚ್ಯಾ ರಿತಿ ಸರ್ಕೆ ಸೊಸಲ್ಲೊ ದುಖ್ ಮರಾನ್ ಹಾನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:10
32 ತಿಳಿವುಗಳ ಹೋಲಿಕೆ  

ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.


ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.


ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು; ಆತ್ಮವೇ ನೊಂದರೆ ಸಹಿಸುವವರಾರು?


ದಲಿತರ ದಿನಗಳೆಲ್ಲ ದುಃಖಭರಿತ; ಹರ್ಷ ಹೃದಯನಿಗೆ ಸದಾ ಹಬ್ಬದಾನಂದ.


ಹರ್ಷಹೃದಯದಿಂದ ಮುಖ ಅರಳುವುದು; ಮನೋವ್ಯಥೆಯಿಂದ ಚೈತನ್ಯ ಕುಂದುವುದು.


ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಅವನು ಒಂದು ದಿನ ಅಮ್ನೋನನನ್ನು, “ರಾಜಪುತ್ರರೇ, ನೀವು ದಿನೇದಿನೇ ಕ್ಷೀಣವಾಗುತ್ತಾ ಬರುವುದೇಕೆ? ನನಗೆ ತಿಳಿಸಬಾರದೇ?,” ಎಂದು ಕೇಳಿದನು. ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ,” ಎಂದು ಉತ್ತರಕೊಟ್ಟನು.


ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.


ನಾನಪರಾಧಿಯೆಂದು ನಿವೇದಿಸುವೆ I ಪಾಪಕ್ಕಾಗಿ ಪಶ್ಚಾತ್ತಾಪ ಪಡುವೆ II


ನಗೆಗಿಂತ ಅಳುವು ಲೇಸು; ಮುಖದಲ್ಲಿ ದುಃಖ, ಹೃದಯಕ್ಕೆ ಸುಖ..


ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು