Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:14 - ಕನ್ನಡ ಸತ್ಯವೇದವು C.L. Bible (BSI)

14 ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೂ ಸತ್ಯವೆಂದು ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದೆನು. ಅದು ಸಮರ್ಪಕವೆಂದು ನೀವು ನಿರೂಪಿಸಿದಿರಿ. ನಾವು ನಿಮಗೆ ಹೇಳಿದ ಪ್ರತಿಯೊಂದೂ ಸತ್ಯವಾಗಿತ್ತು. ನಾವು ತೀತನ ಮುಂದೆ ನಿಮ್ಮ ವಿಷಯದಲ್ಲಿ ಹೇಳಿದ ಹೊಗಳಿಕೆಯ ಮಾತುಗಳೆಲ್ಲಾ ಸತ್ಯವೆಂದು ನೀವು ನಿರೂಪಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ವಿಷಯವಾಗಿ ನಾನು ತೀತನ ಮುಂದೆ ಹೊಗಳಿದ್ದಕ್ಕೆ ನಾನು ಬೇಸರಪಡಬೇಕಾಗಿರಲಿಲ್ಲ. ನಾನು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ನಿಮ್ಮ ಬಗ್ಗೆ ನಾವು ತೀತನ ಬಗ್ಗೆ ಹೊಗಳಿದ್ದೆಲ್ಲವೂ ಸತ್ಯವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಚೆಕ್ಡೆ ತುಮ್ಚ್ಯಾ ವಿಶಯಾತ್ ಮಿಯಾ ಮೊಟೆಪಾನ್ ಬೊಲಲ್ಲೊ ಜಾಲ್ಯಾರ್ಬಿ ಮಿಯಾ ಲಜ್ಜೆತ್ ಪಡುಕ್ನಾ. ಕಶೆ ಮಿಯಾ ಅಜುನ್ ಪತರ್ ತುಮ್ಚೆಕ್ಡೆ ಬೊಲಲ್ಲೆ ಸಗ್ಳೆಬಿ ಖರೆ ಹೊಲಾ, ತಸೆಚ್ ಮಿಯಾ ತಿತಾಕ್ಡೆ ತುಮ್ಚ್ಯಾ ವಿಶಯಾತ್ ಬೊಲಲ್ಲೆಬಿ ಸಮಾ ಹಾಯ್ ಮನುನ್ ಖರೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:14
12 ತಿಳಿವುಗಳ ಹೋಲಿಕೆ  

ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.


ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.


ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.


ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.


ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.


ನಿಮ್ಮಲ್ಲಿಗೆ ನಾನು ಮರಳಿಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು