Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:15 - ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮೆಲ್ಲರ ವಿನಯ-ವಿಧೇಯತೆಯನ್ನು, ಭಯಭಕ್ತಿಯಿಂದ ನೀವು ನೀಡಿದ ಸ್ವಾಗತವನ್ನು ಸ್ಮರಿಸಿಕೊಳ್ಳುವಾಗಲೆಲ್ಲ ನಿಮ್ಮ ಮೇಲೆ ಆತನಿಗಿರುವ ಪ್ರೀತಿ ಉಕ್ಕಿ ಹರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಮನೋಭೀತಿಯಿಂದ ನಡುಗುವವರಾಗಿ ಅವನನ್ನು ಸೇರಿಸಿಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯು ತೋರಬಂತು. ಅವನು ಅದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಕನಿಕರವು ಹೆಚ್ಚಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವೆಲ್ಲರೂ ವಿಧೇಯರಾಗಿರಲು ಸಿದ್ಧರಾಗಿದ್ದನ್ನು ಜ್ಞಾಪಿಸಿಕೊಂಡಾಗಲೆಲ್ಲಾ ಅವನಿಗೆ ನಿಮ್ಮ ಮೇಲೆ ಪ್ರೀತಿಯು ಹೆಚ್ಚಾಗುತ್ತದೆ. ನೀವು ಅವನನ್ನು ಗೌರವದಿಂದಲೂ ಭಯದಿಂದಲೂ ಸ್ವೀಕರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ತೀತನ ಮಾತುಗಳಿಗೆ ವಿಧೇಯರಾಗಿದ್ದುದ್ದನ್ನೂ ಅವನನ್ನು ಭಯಭಕ್ತಿಯಿಂದಲೂ ನಡುಗುವಿಕೆಯಿಂದಲೂ ಸ್ವೀಕರಿಸಿದ್ದನ್ನೂ, ಅವನು ಜ್ಞಾಪಕಕ್ಕೆ ತಂದುಕೊಂಡಾಗ, ನಿಮ್ಮನ್ನು ಅತ್ಯಧಿಕವಾಗಿ ಪ್ರೀತಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮ್ಚ್ಯಾ ಸಗ್ಳ್ಯಾಂಚ್ಯಾ ಖಾಲ್ತಿಪಾನಾಚ್ಯಾ ವಿಶಯಾತ್ ಅನಿ ಭಿಂಯಾನ್ ಥರ್ಥರುನ್ ತುಮಿ ತೆಕಾ ತುಮ್ಚ್ಯಾ ಮದ್ದಿ ಬಲ್ವುನ್ ಘೆಟಲ್ಲ್ಯಾ ವಿಶಯಾತ್ ತೊ ಚಿಂತ್ತಾನಾ, ತೆಚೊ ಮನ್ ತುಮ್ಚ್ಯಾ ಪ್ರೆಮಾನಿ ಭರುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:15
23 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.


ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು.


ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ನನ್ನ ಕಾಂತನು ಕೈಯೊಡ್ಡಿಹನು ಬಾಗಿಲ ಸಂದಿನಲಿ ನನ್ನ ಮನ ಮಿಡಿಯಿತು ನನ್ನಂತರಂಗದಲಿ.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


“ಭಯಭಕುತಿಯಿಂದ ಪ್ರಭುವಿಗೆ ಸೇವೆಮಾಡಿರಿ I ನಡುನಡುಗುತ ಆತನ ಪಾದಪೂಜೆ ಮಾಡಿರಿ” II


ಇದನು ನೆನೆದಾಗ ನನಗೆ ತಲ್ಲಣವಾಗುತ್ತದೆ ನನ್ನ ದೇಹಕ್ಕೆ ನಡುಕ ಬರುತ್ತದೆ:


ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.


ಇಸ್ರಯೇಲ್ ದೇವರ ವಿಧಿಗಳ ಬಗ್ಗೆ ಗೌರವವಿದ್ದವರೆಲ್ಲರು ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು, ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧವಾಗಿ ಕುಳಿತುಕೊಂಡಿದ್ದೆ;


ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.


ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.


ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.


ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ;


ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು