Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:2 - ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವನ್ನು ಕೊಡಿರಿ. ನಾವು ನಿಮ್ಮಲ್ಲಿ ಯಾರಿಗೂ ಕೆಟ್ಟದ್ದನ್ನು ಮಾಡಿಲ್ಲ. ಯಾರ ನಂಬಿಕೆಯನ್ನೂ ಹಾಳುಮಾಡಿಲ್ಲ; ಯಾರನ್ನೂ ವಂಚಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮ್ಚ್ಯಾ ಮನಾತ್ನಿ ಅಮ್ಕಾ ಜಾಗೊ ದಿವಾ. ಅಮಿ ಕೊನಾಕುಚ್ ಅನ್ನ್ಯಾಯ್ ಕರುಕ್ನಾವ್. ಕೊನಾಕ್‍ಬಿ ವಾಯ್ಟ್ ಕರುಕ್ನಾವ್, ನಾಹೊಲ್ಯಾರ್ ಕೊನಾ ವೈನಾಬಿ ಫಾಯ್ದೊ ಘೆವ್ಕ್ ಬಗುಕ್‍ನಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:2
23 ತಿಳಿವುಗಳ ಹೋಲಿಕೆ  

ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


“ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ.


ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.


ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.


ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು.


ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ.


ನನ್ನನ್ನು ಯಾರೂ ಹುಚ್ಚನೆಂದು ಭಾವಿಸದಿರಲಿ, ಎಂದು ಮತ್ತೆ ಹೇಳುತ್ತೇನೆ. ಒಂದು ವೇಳೆ ಹಾಗೆ ಭಾವಿಸಿದರೂ ಚಿಂತೆಯಿಲ್ಲ. ನನ್ನನ್ನು ಹುಚ್ಚನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


“ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು