Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:5 - ಕನ್ನಡ ಸತ್ಯವೇದವು C.L. Bible (BSI)

5 ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಮನಸ್ಸಿಗೆ ಏನೂ ಉಪಶಮನವಾಗಲಿಲ್ಲ, ಎಲ್ಲಾ ವಿಷಯಗಳಲ್ಲಿಯೂ ನಮಗೆ ಸಂಕಟವಿತ್ತು; ಹೊರಗೆ ಕಲಹ, ಒಳಗೆ ಭಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವು ಮಕೆದೋನಿಯಕ್ಕೆ ಬಂದಾಗ ನಮಗೆ ವಿಶ್ರಾಂತಿಯೇ ಇರಲಿಲ್ಲ. ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿದ್ದವು. ಹೊರಗೆ ಕಲಹವಿತ್ತು, ಒಳಗೆ ಭಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಮೆಸಿದೊನಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಸಗ್ಳೆಚ್ ಹಾರುನ್ ಗೆಲ್ಲಾಂವ್, ಸಗ್ಳ್ಯಾಕ್ಡೆ ಅಮ್ಕಾ ಕಸ್ಟಾಚ್ ರಾಕುನ್ಗೆತ್ ಹೊತ್ತಿ, ಭಾಯ್ನಾ ಝಗ್ಡೆ, ಭುತ್ತುರ್ನಾ ಭಿಂಯೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:5
23 ತಿಳಿವುಗಳ ಹೋಲಿಕೆ  

ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.


ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.


ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.


ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.


ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.


ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ನೀವು ಸುಟ್ಟ ಸುಣ್ಣದಂತಾಗುವಿರಿ.


ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.


ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು.


ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು