Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:6 - ಕನ್ನಡ ಸತ್ಯವೇದವು C.L. Bible (BSI)

6 ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಮನಗುಂದಿದವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಧೈರ್ ಚುಕಲ್ಲ್ಯಾಕ್ನಿ ಬಳ್ ದಿತಲ್ಯಾ ದೆವಾನ್, ತಿತಾಚ್ಯಾ ಯೆನ್ಯಾಚ್ಯಾ ವೈನಾ ಅಮ್ಕಾ ಸಮಾದಾನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:6
20 ತಿಳಿವುಗಳ ಹೋಲಿಕೆ  

ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು