Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:10 - ಕನ್ನಡ ಸತ್ಯವೇದವು C.L. Bible (BSI)

10 ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ : ಒಂದು ವರ್ಷಕ್ಕೆ ಹಿಂದೆ ನೀವು ಪ್ರಾರಂಭಿಸಿದ ಈ ಸೇವಾಕಾರ್ಯವನ್ನು ಪೂರೈಸುವುದು ಲೇಸು. ಈ ಕಾರ್ಯವನ್ನು ಮೊದಲು ಆರಂಭಿಸಿದವರು ನೀವೇ. ಆರಂಭಿಸಬೇಕೆಂದು ಸೂಚಿಸಿದವರೂ ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಧರ್ಮಕಾರ್ಯವನ್ನು ಕುರಿತ ನನ್ನ ಸಲಹೆಯನ್ನು ತಿಳಿಸುತ್ತೇನೆ, ಇದು ನಿಮ್ಮ ಸಹಾಯಕ್ಕೆ; ಈ ಕಾರ್ಯವನ್ನು ಒಂದು ವರ್ಷದ ಹಿಂದೆ ನಡೆಸುವುದಕ್ಕೆ ಪ್ರಾರಂಭಿಸಿದ ನೀವು, ಮುಂದುವರಿಯಲು ಮನಸ್ಸು ಮಾಡಿದ ಹಾಗೆಯೇ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಧರ್ಮಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಈ ಕಾರ್ಯವನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ನಡಿಸಬೇಕೆಂದು ಮನಸ್ಸು ಮಾಡುವದರಲ್ಲಿಯೂ ನೀವು ಅವರಿಗಿಂತ ಮೊದಲಿನವರಾದದರಿಂದ ನಮಗೆ ಅಷ್ಟು ಮಾತ್ರ ಹೇಳುವದು ವಿಹಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ, ಕಳೆದ ವರ್ಷದಲ್ಲಿ ಮೊದಲು ನೀವೇ ಈ ಕಾರ್ಯವನ್ನು ಪ್ರಾರಂಭಿಸಿದ್ದಲ್ಲದೇ ಇದನ್ನು ಮಾಡಬೇಕೆಂದು ಬಯಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹ್ಯಾ ಸಂಗ್ತಿಚ್ಯಾ ವಿಶಯಾತ್ ಮಿಯಾ ತುಮ್ಕಾ ಎಕ್ ಬುದ್ದ್ ಸಾಂಗ್ತಲೆ ತುಮ್ಚ್ಯಾ ಬರ್‍ಯಾಕ್ ಪಡ್ತಾ. ಎಕ್ ವರ್ಸಾಚ್ಯಾ ಅದ್ದಿ ತುಮಿಚ್ ಹೆ ಕಾಮ್ ಸುರು ಕರಲ್ಲ್ಯಾಸಿ, ತೆಬಿ ತುಮ್ಚ್ಯಾ ಎವ್ಡ್ಯಾಕ್ ತುಮಿಚ್ ಸುರು ಕರಲ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:10
18 ತಿಳಿವುಗಳ ಹೋಲಿಕೆ  

ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ನೆರವು ನೀಡಲು ಸಿದ್ಧರಿದ್ದೀರೆಂದು ನನಗೆ ಚೆನ್ನಾಗಿ ಗೊತ್ತಿದೆ. “ಅಖಾಯದ ಸಹೋದರರು ಕಳೆದ ವರ್ಷದಿಂದಲೂ ನೆರವು ನೀಡಲು ಏರ್ಪಾಡುಮಾಡುತ್ತಿರುವರು,” ಎಂದು ಮಕೆದೋನಿಯರ ಮುಂದೆ ನಾನು ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಉತ್ಸಾಹ ಅವರಲ್ಲಿ ಅನೇಕರನ್ನು ಹುರಿದುಂಬಿಸಿದೆ.


ಆಕೆ ವಿವಾಹವಾಗದೆ ಹಾಗೇ ಉಳಿದರೆ ಹೆಚ್ಚು ಭಾಗ್ಯವಂತಳು. ಇದು ನನ್ನ ಅಭಿಪ್ರಾಯ. ಆದರೂ ದೇವರ ಆತ್ಮದ ಪ್ರೇರಣೆಯಿಂದ ಇದನ್ನು ಹೇಳುತ್ತಿದ್ದೇನೆ, ಎಂಬುದೇ ನನ್ನ ನಂಬಿಕೆ.


ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:


“ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


“ಏನನ್ನು ಮಾಡಲೂ ಸ್ವಾತಂತ್ರ್ಯವಿದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ಪ್ರಯೋಜನಕರವಲ್ಲ. ಏನನ್ನು ಮಾಡಲೂ ಸ್ವಾತಂತ್ರ್ಯವಿದೆ. ಆದರೆ ಎಲ್ಲವೂ ಅಭಿವೃದ್ಧಿಕರವಲ್ಲ.


“ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.


ಸಮಸ್ತ ಜನತೆಗಾಗಿ ಒಬ್ಬನು ಸತ್ತರೆ ವಿಹಿತವೆಂದು ಸಲಹೆಕೊಟ್ಟವನು ಈ ಕಾಯಫನೇ.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು