Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:12 - ಕನ್ನಡ ಸತ್ಯವೇದವು C.L. Bible (BSI)

12 ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದಾನ್ ದಿತಲೊ ಖರೊ ಮನ್ ಕೊನಾಕ್‍ಬಿ ರ್‍ಹಾಲ್ಯಾರ್ ತೆನಿ ಹಾತ್ ಉಕ್ಲುನ್ ದಿಲ್ಲೆ ದೆವ್ ಘೆತಾ. ತೆಚೆಕ್ಡೆ ನಸಲ್ಲೆ ದೆವ್ ಇಚಾರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:12
21 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.


ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು,


“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.


ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.


ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.


ಆದ್ದರಿಂದ ಆರಂಭಿಸುವುದರಲ್ಲಿ ಎಷ್ಟು ಆಸಕ್ತರಾಗಿದ್ದಿರೋ, ಅಷ್ಟೇ ಆಸಕ್ತಿಯಿಂದ ನಿಮ್ಮ ನಿಮ್ಮ ಶಕ್ತಿಗನುಸಾರವಾಗಿ ನೀಡಿ ಈ ಯೋಜನೆಯನ್ನು ಪೂರೈಸಿರಿ.


ನಿಮ್ಮ ಕೊಡುಗೆಯಿಂದ ಇತರರ ಕಷ್ಟ ಪರಿಹಾರವಾಗಬೇಕು; ಅದರಿಂದ ನಿಮಗೆ ನಷ್ಟವುಂಟಾಗಬೇಕು ಎಂದು ಸಮಾನತೆ ಇರಬೇಕು.


ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.


ಯಾರಲ್ಲಿ ಬೆಳ್ಳಿ ಇಲ್ಲವೆ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಸರ್ವೇಶ್ವರನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು