Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:17 - ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ಬಳಿಗೆ ಹೋಗಬೇಕೆಂದು ಕೇಳಿಕೊಂಡಾಗ ಆತನು ಕೂಡಲೇ ಸಮ್ಮತಿಸಿದನು. ಅಷ್ಟೇ ಅಲ್ಲ, ನಿಮಗೆ ನೆರವಾಗಲು, ನಿಮ್ಮ ಬಳಿಗೆ ಬರಲು ಆತನೇ ಸ್ವಂತ ಇಷ್ಟದಿಂದ ಹೊರಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದನಲ್ಲದೆ ಅತ್ಯಾಸಕ್ತನಾಗಿದ್ದು, ತನ್ನ ಸ್ವಚಿತ್ತದಿಂದ ನಿಮ್ಮ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬರುವದಕ್ಕೆ ಹೊರಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾವು ಕೇಳಿಕೊಂಡ ಕಾರ್ಯಗಳನ್ನು ಮಾಡಲು ತೀತನು ಒಪ್ಪಿಕೊಂಡನು. ನಿಮ್ಮ ಬಳಿಗೆ ಬರಲು ಅವನು ಅತ್ಯಾಸಕ್ತನಾಗಿದ್ದನು. ಇದು ಅವನ ಸ್ವಂತ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಮ್ಮ ವಿನಂತಿಯನ್ನು ತೀತನು ಒಪ್ಪಿಕೊಂಡದ್ದು ಮಾತ್ರವಲ್ಲದೆ, ತನ್ನ ಸ್ವಂತ ಇಚ್ಛೆಯಿಂದ ನಿಮ್ಮಲ್ಲಿಗೆ ಬರಲು ಆಸಕ್ತಿಯಿಂದ ಹೊರಟಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮಿ ಇಚಾರಲ್ಲೊ ಉಪ್ಕಾರ್ ಕರುಕ್ ತಿತ್ ತಯಾರ್ ಹೊಲಾ, ತವ್ಡೆಚ್ ನ್ಹಯ್ ತೊಚ್ ಮೊಟ್ಯಾ ಉಮ್ಮೆದಿನ್ ತುಮ್ಕಾ ಭೆಟ್ ದಿವ್ಕ್ ಯೆವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:17
5 ತಿಳಿವುಗಳ ಹೋಲಿಕೆ  

ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.


ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.


ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ : ಒಂದು ವರ್ಷಕ್ಕೆ ಹಿಂದೆ ನೀವು ಪ್ರಾರಂಭಿಸಿದ ಈ ಸೇವಾಕಾರ್ಯವನ್ನು ಪೂರೈಸುವುದು ಲೇಸು. ಈ ಕಾರ್ಯವನ್ನು ಮೊದಲು ಆರಂಭಿಸಿದವರು ನೀವೇ. ಆರಂಭಿಸಬೇಕೆಂದು ಸೂಚಿಸಿದವರೂ ನೀವೇ.


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು