Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:21 - ಕನ್ನಡ ಸತ್ಯವೇದವು C.L. Bible (BSI)

21 ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವವಾದದ್ದನ್ನು ಯೋಚನೆಗೆ ತಂದುಕೊಳ್ಳುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ, ಕರ್ತ ಯೇಸುವಿನ ದೃಷ್ಟಿಯಲ್ಲಿ ಮಾತ್ರ ಅಲ್ಲ, ಜನರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡಬೇಕೆಂಬುದು ನಮ್ಮ ಪ್ರಯಾಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚ್ಯಾ ಡೊಳಾಚ್ಯಾ ಇದ್ರಾಕ್ ಎವ್ಡೆಚ್ ನ್ಹಯ್ , ಮಾನ್ಸಾಂಚ್ಯಾಬಿ ದೊಳ್ಯಾಂಚ್ಯಾ ಇದ್ರಾಕ್ ಹೊಯ್ ಸರ್ಕೆ ದಿಸುಚೆ ತಸೆ ಕರುಚೆ ಮನ್ತಲೊಚ್ ಅಮ್ಚೊ ಉದ್ದೆಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:21
19 ತಿಳಿವುಗಳ ಹೋಲಿಕೆ  

ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.


ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.


ನಮ್ಮ ವಶಕ್ಕೆ ಒಪ್ಪಿಸಲಾಗಿರುವ ಈ ಉದಾರ ಕೊಡುಗೆಯ ವಿತರಣೆಯಲ್ಲಿ ಯಾರೂ ನಮ್ಮ ಮೇಲೆ ತಪ್ಪುಹೊರಿಸಲು ಆಸ್ಪದವಿರಕೂಡದು.


ಇವರಿಬ್ಬರ ಸಂಗಡ ಮತ್ತೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಈತನು ಆಸಕ್ತಿ ಉಳ್ಳವನೆಂದು ಅನುಭವದಿಂದ ಕಂಡುಕೊಂಡಿದ್ದೇವೆ. ನಿಮ್ಮಲ್ಲಿ ಪೂರ್ಣ ಭರವಸೆಯಿಟ್ಟು ನಿಮಗೆ ನೆರವಾಗಲು ಆತನು ಹೆಚ್ಚು ಉತ್ಸುಕನಾಗಿದ್ದಾನೆ.


ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.


ಅವರು ಅಂತೆಯೇ ತೆಗೆದುಕೊಂಡು ಬಂದರು. “ಇನ್ನೊಂದು ಸಾರಿ ತನ್ನಿ,” ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು