Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:3 - ಕನ್ನಡ ಸತ್ಯವೇದವು C.L. Bible (BSI)

3 ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿಮೀರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಶಕ್ತ್ಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಕೊಟ್ಟಿದ್ದಾರೆಂದು ನಾನು ನಿಮಗೆ ಹೇಳುತ್ತೇನೆ. ಅವರು ತಮ್ಮ ಶಕ್ತಿಮೀರಿ ಕೊಟ್ಟಿದ್ದಾರೆ. ಅವರು ತಾವಾಗಿಯೇ ಕೊಟ್ಟರು. ಕೊಡಬೇಕೆಂದು ಅವರಿಗೆ ಯಾರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ತಮಗೆ ಸಾಧ್ಯವಾದಷ್ಟು ಕೊಟ್ಟಿದ್ದಾರೆ. ಮಾತ್ರವಲ್ಲದೇ ತಮ್ಮ ಶಕ್ತಿ ಮೀರಿ ಕೊಟ್ಟಿದ್ದಾರೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಪ್ನಾ ಅಪ್ನಾಚ್ಯಾ ತಾಕ್ತಿ ಪರ್‍ಕಾರ್ ಕವ್ಡೆ ದಿವ್ಕ್ ಹೊತಾ ತವ್ಡೆ ಅನಿ ಅನಿಬಿ ಜಾಸ್ತಿಚೆ ತೆಂಚ್ಯಾ ಸ್ವಂತ್ ಮನಾನಿ ತೆನಿ ದಿಲ್ಯಾನಾತ್ ಮನುನ್ ಮಿಯಾ ಖರೆಚ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:3
22 ತಿಳಿವುಗಳ ಹೋಲಿಕೆ  

ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು,


ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ.


ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.


ನಿಮಗಾಗಿಯೂ ಲವೊದಿಕೀಯ ಹಾಗೂ ಹಿರೆಯಾಪೊಲಿಯದ ಜನರಿಗಾಗಿಯೂ ಆತನು ಶ್ರಮವಹಿಸಿ ದುಡಿಯುತ್ತಿದ್ದಾನೆಂಬುದಕ್ಕೆ ನಾನೇ ಸಾಕ್ಷಿ.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!


ತನ್ನಿಂದ ಏನು ಸಾಧ್ಯವೋ ಅದನ್ನು ಈಕೆ ಮಾಡಿದ್ದಾಳೆ; ನನ್ನ ದೇಹವನ್ನು ಮುಂಚಿತವಾಗಿಯೇ ಸುಗಂಧ ತೈಲದಿಂದ ಲೇಪಿಸಿ ಅದನ್ನು ಶವಸಂಸ್ಕಾರಕ್ಕಾಗಿ ಸಿದ್ಧಪಡಿಸಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು