Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:7 - ಕನ್ನಡ ಸತ್ಯವೇದವು C.L. Bible (BSI)

7 ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ದೇವರ ಮೇಲಣ ನಂಬಿಕೆ ವಾಕ್ಚಾತುರ್ಯ ಜ್ಞಾನ ಸಕಲವಿಧವಾದ ಆಸಕ್ತಿ ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿ ಇವೇ ಮೊದಲಾದ ಎಲ್ಲಾ ವಿಷಯಗಳಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೇಗೆ ನೀವು ವಿಶ್ವಾಸ, ವಾಕ್ಚಾತುರ್ಯ, ತಿಳುವಳಿಕೆ, ಉತ್ಸಾಹ ಹಾಗೂ ನಮ್ಮ ಮೇಲೆ ನಿಮಗಿರುವ ಪ್ರೀತಿ, ಇವೆಲ್ಲವುಗಳಲ್ಲಿ ನೀವು ಸಮೃದ್ಧರಾಗಿದ್ದಂತೆ, ಈ ದಾನವೆಂಬ ಕೃಪಾಕಾರ್ಯದಲ್ಲಿಯೂ ಸಮೃದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸಗ್ಳ್ಯಾ ಸಂಗ್ತಿಯಾತ್ನಿ ಕಶೆ ತುಮಿ ಪಯ್ಲೆ ಮಟ್ಲ್ಯಾರ್ ವಿಶ್ವಾಸಾನ್ ಪ್ರಚಾರ್ ಕರ್‍ತಲ್ಯಾ ಉಶ್ಯಾರ್ಕಿನ್ ಶಾನ್ಪಾನಾನ್, ಮಜತ್ ದಿತಲ್ಯಾ ಬರ್‍ಯಾ ಕಾಮಾತ್ ಅನಿ ಅಮಿ ತುಮ್ಕಾ ಶಿಕ್ವಲ್ಲ್ಯಾ ಪ್ರೆಮಾನ್, ತಶೆಚ್ ಹ್ಯಾ ದಾನ್ ಕರ್‍ತಲ್ಯಾ ಬರ್‍ಯಾ ಕಾಮಾಚ್ಯಾ ವೈನಾ ತುಮಿ ಪಯ್ಲೆಚಿ ಹೊವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:7
25 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ.


ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.


ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.


ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು.


ಆದ್ದರಿಂದ ಪವಿತ್ರಾತ್ಮ ವರಗಳ ಮೇಲೆ ಆಸಕ್ತಿಯುಳ್ಳ ನೀವು, ಧರ್ಮಸಭೆಯನ್ನು ಅಭಿವೃದ್ಧಿಗೊಳಿಸಬಲ್ಲ ವರಗಳ ಮೇಲೆ ಆಸಕ್ತರಾಗಿರಿ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು