2 ಕೊರಿಂಥದವರಿಗೆ 8:8 - ಕನ್ನಡ ಸತ್ಯವೇದವು C.L. Bible (BSI)8 ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದನ್ನು ಆಜ್ಞಾರೂಪವಾಗಿ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯೂ ಯಥಾರ್ಥವಾದದ್ದೆಂಬದನ್ನು ಪರೀಕ್ಷೆಯಿಂದ ತಿಳಿದುಕೊಳ್ಳಬೇಕೆಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದು ನಿಮಗೆ ನನ್ನ ಆಜ್ಞೆಯಲ್ಲ. ಆದರೆ ಇತರರಿಗೆ ನಿಮಗಿರುವ ಈ ಸೇವಾಕಾರ್ಯದ ಉತ್ಸಾಹವನ್ನೂ ನಮ್ಮ ಮೇಲಿರುವ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾಗಿದೆಯೆಂಬುದನ್ನೂ ಹೋಲಿಕೆಮಾಡಿ ಪರೀಕ್ಷಿಸಿನೋಡಲು ಬಯಸುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹೆ ಮಿಯಾ ಸಾಂಗಟಲ್ಲೆ ಎಕ್ ಹುಕುಮ್ ಮನುನ್ ತುಮಿ ಚಿಂತುನಕಾಶಿ, ದುಸ್ರ್ಯಾಂಚ್ಯಾ ಇಮೆಂದಿಚ್ಯಾ ವಿಶಯಾತ್ ಬೊಲುನ್ ತುಮ್ಚೊ ಪ್ರೆಮ್‍ಬಿ ತಸ್ಲೊಚ್ ಮನುನ್ ದಾಕ್ವುನ್ ದಿವ್ಚೆ, ಮನ್ತಲೊಚ್ ಮಾಜೊ ಉದ್ದೆಸ್. ಅಧ್ಯಾಯವನ್ನು ನೋಡಿ |