Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:1 - ಕನ್ನಡ ಸತ್ಯವೇದವು C.L. Bible (BSI)

1 ದೇವಜನರಿಗೆ ಸಲ್ಲಿಸಬೇಕಾದ ಈ ಸೇವಾಕಾರ್ಯವನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವಜನರಿಗೋಸ್ಕರ ನಡೆಯುವ ಸಹಾಯಕಾರ್ಯವನ್ನು ಕುರಿತು ನಿಮಗೆ ಬರೆಯುವದಕ್ಕೆ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವಜನರಿಗೆ ಸಹಾಯ ಮಾಡುವುದನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಧನಿಯಾಚ್ಯಾ ಲೊಕಾಕ್ನಿ ಸೆವಾ ದಿತಲ್ಯಾ ವಿಶಯಾತ್ ಮಿಯಾ ತುಮ್ಕಾ ಅತ್ತಾ ಲಿವ್ತಲಿ ಗರಜ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:1
18 ತಿಳಿವುಗಳ ಹೋಲಿಕೆ  

ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ನಮ್ಮಿಬ್ಬರ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ನಿತ್ಯಸಾಕ್ಷಿಯಾಗಿರುವರು,” ಎಂದನು.


ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.


ಇದಲ್ಲದೆ, ಸತ್ತವರು ಪುನರುತ್ಥಾನ ಹೊಂದುವ ವಿಷಯದಲ್ಲಿ ಹೇಳುವುದಾದರೆ,


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ,


ತನ್ನ ಹಿರಿಯ ಮಗ ಏಸಾವನ ಅನಿಸಿಕೆಯು ರೆಬೆಕ್ಕಳಿಗೆ ತಿಳಿದು ಬಂದಾಗ ಆಕೆ ತನ್ನ ಕಿರಿಯ ಮಗ ಯಕೋಬನನ್ನು ಕರೆದು ಹೀಗೆಂದಳು: “ನೋಡು, ನಿನ್ನ ಅಣ್ಣ ಏಸಾವನು ನಿನ್ನನ್ನು ಕೊಂದು ಸೇಡು ತೀರಿಸಿಕೊಳ್ಳಬೇಕೆಂದಿದ್ದಾನೆ.


ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು