Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:10 - ಕನ್ನಡ ಸತ್ಯವೇದವು C.L. Bible (BSI)

10 ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪೆರ್‍ತಲ್ಯಾಕ್ ಬಿಂಯ್ ಅನಿ ಖಾತಲ್ಯಾಕ್ ಭಾಕ್ರಿ ಗಾವಿ ಸರ್ಕೆ ಕರ್‍ತಾ ತೊ ದೆವ್ ಭರ್ಪುರ್ ಮಾಪಾನ್ ತುಮ್ಚ್ಯಾ ಬಿಯಾಳಾಕ್‍ಬಿ ಚೆಡ್ವುತಾ ಅನಿ ತುಮ್ಚ್ಯಾ ದಾನಾಚೊ ಪಳ್ ಜಾಸ್ತಿ ವಾಡ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:10
16 ತಿಳಿವುಗಳ ಹೋಲಿಕೆ  

ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.


ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುತ್ತಾನೆ ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.


ಹೀಗೆ ನಿಮ್ಮ ಕೊಡುಗೆ ದೇವಜನರ ಕೊರತೆಗಳನ್ನು ನೀಗಿಸುವುದಲ್ಲದೆ ಅನೇಕರು ದೇವರಿಗೆ ಸ್ತೋತ್ರ ಸಲ್ಲಿಸುವಂತೆ ಮಾಡುವುದು.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು