2 ಕೊರಿಂಥದವರಿಗೆ 9:11 - ಕನ್ನಡ ಸತ್ಯವೇದವು C.L. Bible (BSI)11 ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡ ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾವಾಗಲೂ ಉದಾರವಾಗಿ ಕೊಡಬೇಕೆಂದು ದೇವರು ನಿಮ್ಮನ್ನು ಪ್ರತಿಯೊಂದು ವಿಷಯದಲ್ಲಿಯೂ ಶ್ರೀಮಂತರನ್ನಾಗಿ ಮಾಡುವನು. ನಮ್ಮ ಮೂಲಕವಾಗಿ ನೀವು ಕೊಡುವ ಸಹಾಯಧನದ ನಿಮಿತ್ತ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತುಮ್ಚೊ ಬರೊ ಮನ್ ಅನಿಬಿ ಮೊಟೊ ಕರುಸಾಟಿ ಹರಿಎಕ್ ವಾಟೆನ್ ತುಮ್ಕಾ ತೊ ಸಾವ್ಕಾರ್ ಕರ್‍ತಾ, ಅನಿ ತುಮ್ಚಿ ದೆನಿ ಅಮ್ಚ್ಯಾ ವೈನಾ ಲೈ ಲೊಕಾಕ್ನಿ ಗಾವಲ್ಲ್ಯಾ ತನ್ನಾ ದೆವಾಕ್ ತೆನಿ ಧನ್ಯವಾದ್ ದಿವ್ಕ್ ಪಾವ್ತಾತ್. ಅಧ್ಯಾಯವನ್ನು ನೋಡಿ |