Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:13 - ಕನ್ನಡ ಸತ್ಯವೇದವು C.L. Bible (BSI)

13 ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ಸಹಾಯದಿಂದ ತೋರಿಬಂದ ನಿಮ್ಮ ಯೋಗ್ಯಭಾವವನ್ನು ಅವರು ನೋಡುವಾಗ ನೀವು ಮಾಡಿದ್ದ ಪ್ರತಿಜ್ಞೆಗೆ ಸರಿಯಾಗಿ ಕ್ರಿಸ್ತನ ಸುವಾರ್ತೆಯನ್ನು ಅನುಸರಿಸಿದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹ್ಯಾ ಪ್ರೆಮಾಚ್ಯಾ ಸೆವೆಚ್ಯಾ ವೈನಾ ತುಮ್ಚೊ ವಿಶ್ವಾಸ್ ಕಸ್ಲೊ ಮನುನ್ ತುಮಿ ದಾಕ್ವುನ್ ದಿತ್ಯಾಶಿ. ಮಟ್ಲ್ಯಾರ್ ಕ್ರಿಸ್ತಾಚಿ ಬರಿ ಖಬರ್ ತುಮಿ ಮಾನುನ್ ಘೆತ್ಯಾಶಿ, ತಶೆಚ್ ಪಾಳ್ತಾಶಿ ಮನುನ್ ಅನಿ ತುಮ್ಚ್ಯಾಕ್ಡೆ ಕಾಯ್ ಹಾಯ್ ತೆ ತೆಂಕಾಬಿ ಅನಿ ದುಸ್ರ್ಯಾಕ್ನಿಬಿ ಸಗ್ಳ್ಯಾ ಮನಾನ್ ತುಮಿ ವಾಟುನ್ ದಿತ್ಯಾಶಿ ಮನುನ್ ಕಳ್ವುನ್ ಘೆವ್ನ್ ದೆವಾಕ್ ಧನ್ಯವಾದ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:13
27 ತಿಳಿವುಗಳ ಹೋಲಿಕೆ  

ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.


ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಅದನ್ನು ನೋಡಿ ನವೊಮಿ, “ನೀನು ಈ ದಿನ ಎಲ್ಲಿ ಹಕ್ಕಲಾಯ್ದೆ? ಯಾರ ಹೊಲದಲ್ಲಿ ಕೆಲಸಮಾಡಿದೆ? ನಿನಗೆ ದಯೆ ತೋರಿಸಿದವನಿಗೆ ಶುಭವಾಗಲಿ!” ಎಂದಳು. ಅದಕ್ಕೆ ರೂತಳು, “ನಾನು ತೆನೆ ಆಯ್ದುಕೊಂಡ ಹೊಲವು ಬೋವಜನದು,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು