Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:2 - ಕನ್ನಡ ಸತ್ಯವೇದವು C.L. Bible (BSI)

2 ನೆರವು ನೀಡಲು ಸಿದ್ಧರಿದ್ದೀರೆಂದು ನನಗೆ ಚೆನ್ನಾಗಿ ಗೊತ್ತಿದೆ. “ಅಖಾಯದ ಸಹೋದರರು ಕಳೆದ ವರ್ಷದಿಂದಲೂ ನೆರವು ನೀಡಲು ಏರ್ಪಾಡುಮಾಡುತ್ತಿರುವರು,” ಎಂದು ಮಕೆದೋನಿಯರ ಮುಂದೆ ನಾನು ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಉತ್ಸಾಹ ಅವರಲ್ಲಿ ಅನೇಕರನ್ನು ಹುರಿದುಂಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಮನಸ್ಸು ಸಿದ್ಧವಾಗಿದೆ ಎಂಬದು ನನಗೆ ಗೊತ್ತುಂಟು. ಒಂದು ವರುಷದ ಹಿಂದೆ ಅಖಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಹಾಯ ಮಾಡಬೇಕೆಂಬ ಬಯಕೆಯು ನಿಮಗಿದೆಯೆಂದು ನನಗೆ ಗೊತ್ತಿದೆ. ಮಕೆದೋನಿಯದಲ್ಲಿ ಜನರಿಗೆ ನಿಮ್ಮ ಈ ವಿಷಯದಲ್ಲಿ ಹೆಮ್ಮೆಯಿಂದ ಹೇಳುತ್ತಲೇ ಇದ್ದೇನೆ. ಅಖಾಯದಲ್ಲಿರುವ ನೀವು ಕಳೆದ ವರ್ಷದಿಂದಲೂ ಕೊಡಲು ಸಿದ್ಧರಾಗಿದ್ದೀರೆಂದು ಅವರಿಗೆ ಹೇಳಿದೆನು. ನಿಮ್ಮಲ್ಲಿರುವ ಕೊಡಬೇಕೆಂಬ ಬಯಕೆಯು ಇಲ್ಲಿರುವ ಅನೇಕ ಜನರಲ್ಲಿ ಕೊಡಬೇಕೆಂಬ ಬಯಕೆಯನ್ನು ಉಂಟುಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹ್ಯಾ ಕಾಮಾತ್ ಮಜತ್ ಕರುಕ್ ತುಮ್ಚ್ಯಾ ಭುತ್ತುರ್ ಹೊತ್ತಿ ಇಮೆಂದ್ ಮಾಕಾ ಗೊತ್ತ್ ಹಾಯ್. ಹ್ಯಾ ವಿಶಯಾತ್ ಮೆಸಿದೊನಿಯಾಚ್ಯಾ ಲೊಕಾಂಚ್ಯಾಕ್ಡೆ ತುಮ್ಚೆ ಮೊಟೆಪಾನ್ ಮಿಯಾ ಯೆವ್ನ್ ಗೆಲ್ಲ್ಯಾ ವರ್ಸಾಕ್ನಾ, ಅಖಾಯಿಯಾಚಿ ಭಾವ್ ಭೆನಿಯಾ ಮಜತ್ ಕರುಕ್ ತಯಾರ್ ಹಾತ್ ಮನುನ್ ಮಿಯಾ ಸಾಂಗಿತ್ ಹಾಂವ್. ಹ್ಯಾ ತುಮ್ಚ್ಯಾ ಇಮೆಂದಿ ವೈನಾ ತೆಂಚ್ಯಾತ್ಲ್ಯಾ ಲೈ ಜಾನಾಕ್ನಿ ಇಮೆಂದ್ ಗಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:2
14 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ : ಒಂದು ವರ್ಷಕ್ಕೆ ಹಿಂದೆ ನೀವು ಪ್ರಾರಂಭಿಸಿದ ಈ ಸೇವಾಕಾರ್ಯವನ್ನು ಪೂರೈಸುವುದು ಲೇಸು. ಈ ಕಾರ್ಯವನ್ನು ಮೊದಲು ಆರಂಭಿಸಿದವರು ನೀವೇ. ಆರಂಭಿಸಬೇಕೆಂದು ಸೂಚಿಸಿದವರೂ ನೀವೇ.


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಸ್ತೇಫನನನ್ನು ಮತ್ತು ಆತನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ಅಖಾಯದ ಪ್ರಥಮ ಕ್ರೈಸ್ತವಿಶ್ವಾಸಿಗಳು. ದೇವಜನರ ಸೇವೆಗೆ ತಮ್ಮನ್ನೇ ಸಮರ್ಪಿಸಿಕೊಂಡವರು. ನಾನು ನಿಮ್ಮಲ್ಲಿ ವಿನಂತಿಸುವುದೇನೆಂದರೆ:


ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ.


ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.


ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.


ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ.


ಆದ್ದರಿಂದ ಆರಂಭಿಸುವುದರಲ್ಲಿ ಎಷ್ಟು ಆಸಕ್ತರಾಗಿದ್ದಿರೋ, ಅಷ್ಟೇ ಆಸಕ್ತಿಯಿಂದ ನಿಮ್ಮ ನಿಮ್ಮ ಶಕ್ತಿಗನುಸಾರವಾಗಿ ನೀಡಿ ಈ ಯೋಜನೆಯನ್ನು ಪೂರೈಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು