Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:4 - ಕನ್ನಡ ಸತ್ಯವೇದವು C.L. Bible (BSI)

4 ನಾನು ನಿಮಗೆ ಹೇಳಿರುವಂತೆ ನಿಮ್ಮ ಏರ್ಪಾಡೆಲ್ಲಾ ಮುಗಿದಿರಬೇಕು. ಇಲ್ಲದಿದ್ದರೆ ನಾನು ಬರುವಾಗ, ನನ್ನ ಜೊತೆಯಲ್ಲಿಯೇ ಮಕೆದೋನಿಯದ ಸಹೋದರರೂ ಬಂದು, ನೀವು ಸಿದ್ಧರಿಲ್ಲದೆ ಇರುವುದನ್ನು ಕಂಡರೆ ನೀವು ತಲೆತಗ್ಗಿಸಬೇಕಾಗುತ್ತದೆ. ನಿಮ್ಮಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ನಾನೂ ತಲೆ ತಗ್ಗಿಸಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವದೆಂದು ನಾವು ಬೇರೆ ಹೇಳಬೇಕೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಒಂದುವೇಳೆ ಮಕೆದೋನಿಯದ ಜನರಲ್ಲಿ ಯಾರಾದರೂ ನನ್ನೊಂದಿಗೆ ಬಂದಾಗ ನೀವು ಸಿದ್ಧರಾಗಿಲ್ಲದಿದ್ದರೆ ನಾವು ನಾಚಿಕೆಗೆ ಗುರಿಯಾಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಬಹಳ ಭರವಸೆ ಇಟ್ಟಿದ್ದರಿಂದ ನಾವು ನಾಚಿಕೆಗೆ ಗುರಿಯಾಗುವೆವು (ಮತ್ತು ನೀವೂ ಸಹ ನಾಚಿಕೆಗೆ ಗುರಿಯಾಗುವಿರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಜೊತೆಯಲ್ಲಿ ಬಂದು, ನೀವು ಇನ್ನೂ ಸಿದ್ಧರಿಲ್ಲದೆ ಇರುವುದನ್ನು ಕಂಡರೆ, ನಿಮಗೆ ಬೇಸರವಾಗುವುದಲ್ಲದೆ, ನಿಮ್ಮ ಬಗ್ಗೆ ಭರವಸೆಯಿಟ್ಟಿರುವುದಕ್ಕೆ ನಾವು ಸಹ ನಾಚಿಕೆಪಡುವ ಸನ್ನಿವೇಶ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ನಾ ಹೊಲ್ಯಾರ್ ಮೆಸಿದೊನಿಯಾಚಿ ಲೊಕಾ ಮಾಜ್ಯಾ ವಾಂಗ್ಡಾ ತುಮ್ಚ್ಯಾಕ್ಡೆ ಯೆಲ್ಯಾರ್, ಅನಿ ತುಮಿ ತಯಾರ್ ನಸಲ್ಲೆ ತೆಂಕಾ ಗಾವ್ಲ್ಯಾಶಿ ಮನುವಾ, ಕಸ್ಲಿ ಲಜ್ಜಾ ಮಾಕಾ ಕರುಚೆ ನ್ಹಯ್! ತುಮ್ಚ್ಯಾ ವಿಶಯಾತ್ ಸೊಡುವಾ, ತುಮ್ಚ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಮಾಕಾ ಕಶೆ ಹೊಯ್ಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:4
7 ತಿಳಿವುಗಳ ಹೋಲಿಕೆ  

ನಾನೀಗ ಹೇಳುತ್ತಿರುವುದು ಪ್ರಭುವಿನ ಪ್ರೇರಣೆಯಿಂದಲ್ಲ, ಧೈರ್ಯದಿಂದ ತನ್ನನ್ನೇ ಕೊಚ್ಚಿಕೊಳ್ಳುವ ಒಬ್ಬ ಹುಚ್ಚನಂತೆ ಹೇಳುತ್ತಿದ್ದೇನೆ:


ನೆರವು ನೀಡಲು ಸಿದ್ಧರಿದ್ದೀರೆಂದು ನನಗೆ ಚೆನ್ನಾಗಿ ಗೊತ್ತಿದೆ. “ಅಖಾಯದ ಸಹೋದರರು ಕಳೆದ ವರ್ಷದಿಂದಲೂ ನೆರವು ನೀಡಲು ಏರ್ಪಾಡುಮಾಡುತ್ತಿರುವರು,” ಎಂದು ಮಕೆದೋನಿಯರ ಮುಂದೆ ನಾನು ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಉತ್ಸಾಹ ಅವರಲ್ಲಿ ಅನೇಕರನ್ನು ಹುರಿದುಂಬಿಸಿದೆ.


ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.


ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ.


ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.


ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು