Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:7 - ಕನ್ನಡ ಸತ್ಯವೇದವು C.L. Bible (BSI)

7 ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರತಿಯೊಬ್ಬ ವ್ಯಕ್ತಿಯು ತನ್ನ ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೋ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹರಿ ಎಕ್ಲೊ ಅಪ್ನಿ ಮನಾತ್ ನಿರ್ನಯ್ ಕರಲ್ಲ್ಯಾ ಪರ್‍ಕಾರ್ ದಿಂವ್ದಿತ್, ಪುರಾ ಸರ್ಕೆ ಕರುನ್ ನ್ಹಯ್ ಕಶ್ಯಾಕ್ ಮಟ್ಲ್ಯಾರ್ ಹಾಸ್ಮುರ್ಕ್ಯಾ ತೊಂಡಾನ್ ದಿತಲೊ ದೆವಾಕ್ ಪ್ರೆಮಾಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:7
17 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.


ದಾನ ಗುಣವುಳ್ಳವನು ಧನವಂತನಾಗುವನು; ನೀರು ಹಾಯಿಸುವವನಿಗೆ ನೀರು ದೊರಕುವುದು.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ.


ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು,


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸಧಾನ್ಯ, ದ್ರಾಕ್ಷರಸ ಇವುಗಳಲ್ಲಿ ಉದಾರವಾಗಿ ಕೊಟ್ಟುಕಳುಹಿಸಬೇಕು.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಇನ್ನು ಮೇಲೆ ಮೂರ್ಖನು ಮಹಾತ್ಮನೆನಿಸಿಕೊಳ್ಳನು. ಕಳ್ಳನು ಒಳ್ಳೆಯವನೆನಿಸಿಕೊಳ್ಳನು.


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು