2 ತಿಮೊಥೆಯನಿಗೆ 1:12 - ಕನ್ನಡ ಸತ್ಯವೇದವು C.L. Bible (BSI)12 ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಹ್ಯಾ ಬರ್‍ಯಾ ಖಬ್ರೆಸಾಟ್ನಿ ಮಿಯಾ ಹ್ಯೊ ಕಸ್ಟ್ ಸೊಸುಕ್ ಲಾಗ್ಲಾ. ಖರೆ ಮಾಕಾ ಅನಿಬಿ ಬರೊಸೊ ಹಾಯ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಕೊನಾಚ್ಯಾ ವರ್‍ತಿ ಬರೊಸೊ ಥವ್ಲಾ; ತೊ ಮಾಕಾ ಗೊತ್ತ್ ಹಾಯ್ ಅನಿ ಜೆ ಕಾಮ್ ಮಿಯಾ ಕರುನ್ ಸಾರ್ತಲೆ ಮನುನ್ ಹಾಯ್; ತ್ಯಾ ದಿಸಾ ಪತರ್ ಮಾಜಿ ರಾಕನ್ ಕರ್‍ತಲೊ ಬಳ್ ತೆಕಾ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |