Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:13 - ಕನ್ನಡ ಸತ್ಯವೇದವು C.L. Bible (BSI)

13 ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ಹೊತ್ತ್ಯಾ ಅಮ್ಚ್ಯಾ ವಿಶ್ವಾಸಾತ್ ಅನಿ ಪ್ರೆಮಾತ್ ರ್‍ಹಾವ್ನ್ ಎಕ್ ಉದಾರನ್ ಹೊವ್ನ್ ಚಲುಸಾಟಿ ಮನುನ್ ಮಿಯಾ ತುಕಾ ಶಿಕ್ವಲ್ಲ್ಯಾ ಖರ್‍ಯಾ ಗೊಸ್ಟಿಯಾ ಮನಾತ್ ಘಟ್ ಥವ್ನ್ ಘೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:13
30 ತಿಳಿವುಗಳ ಹೋಲಿಕೆ  

ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ.


ನೀನಾದರೋ ನಿನಗೆ ಬೋಧಿಸಲಾಗಿರುವ ಹಾಗೂ ನೀನು ದೃಢವಾಗಿ ನಂಬಿರುವ ಸತ್ಯಗಳನ್ನು ಅನುಸರಿಸು.


ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.


ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.


ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.


ಮಕ್ಕಳಿಗೆ ಶಿಕ್ಷಕನೂ ಆಗಿರುವುದಾಗಿ ದೃಢವಾಗಿ ನಂಬಿಕೊಂಡಿದ್ದೀಯೆ; ಧರ್ಮಶಾಸ್ತ್ರದಲ್ಲಿ ಜ್ಞಾನ ಮತ್ತು ಸತ್ಯ ಮೇಳೈಸಿರುವುದಾಗಿ ಭಾವಿಸುತ್ತೀಯೆ.


ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು.


ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.


ನಾನು ಬರುವವರೆಗೆ ನೀವು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿದ್ದರೆ ಅಷ್ಟೇ ಸಾಕು.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು