Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:7 - ಕನ್ನಡ ಸತ್ಯವೇದವು C.L. Bible (BSI)

7 ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಮ್ಕಾ ಭಿಂವ್ಕುರೊ ಆತ್ಮೊ ದಿವ್ಕ್ ನಾ; ತೆಚ್ಯಾ ಬದ್ಲಾಕ್, ತೆಚೊ ಆತ್ಮೊ ಆಮ್ಕಾ ತಾಕ್ತಿನ್, ಪ್ರೆಮಾನ್ ಅನಿ ಅಮ್ಕಾಚ್ ಅಮಿ ಸಂಬಾಳ್ತಲ್ಯಾ ತಾಕ್ತಿನ್ ಭರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:7
28 ತಿಳಿವುಗಳ ಹೋಲಿಕೆ  

ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಜ್ಞಾನವನ್ನು ಸಜ್ಜನರಿಗೆ ಸೇರಿಸಿಡುವನಾತ, ಸನ್ಮಾರ್ಗಿಗಳಿಗೆ ಕವಚವಾಗಿರುವನಾತ.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.


ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು.


ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.


ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.


ಅದಕ್ಕೆ ಪೌಲನು, “ನಾನು ಹುಚ್ಚನಲ್ಲ, ಫೆಸ್ತ ಮಹಾಪ್ರಭೂ, ನಾನು ಆಡುತ್ತಿರುವುದು ತಿಳಿಮನಸ್ಸಿನಿಂದಾಡುವ ಸತ್ಯ.


ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.


ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.


ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು