Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:8 - ಕನ್ನಡ ಸತ್ಯವೇದವು C.L. Bible (BSI)

8 ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚಿ ಸಾಕ್ಷಿ ದಿತಾನಾ ಲಜುನಕೊ; ಕ್ರಿಸ್ತಾಸಾಟ್ನಿ ಮಿಯಾ ಬಂಧಿಖಾನ್ಯಾತ್ ಹಾಂವ್ ಮನುನ್‍ಬಿ ಲಜುನಕೊ. ಕಶೆ ದೆವ್ ತುಕಾ ಬಳ್ ದಿತಾ ತಸೆ ಬರ್‍ಯಾ ಖಬ್ರೆಸಾಟ್ನಿ ಕಸ್ಟ್ ಸೊಸ್ತಲ್ಯಾತ್ ಭಾಗ್ ಘೆವ್ನ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:8
48 ತಿಳಿವುಗಳ ಹೋಲಿಕೆ  

ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.


ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಕ್ರಿಸ್ತಯೇಸುವಿನ ನಿಷ್ಠಾವಂತ ಸೈನಿಕನಂತೆ ಕಷ್ಟದುಃಖಗಳನ್ನು ತಾಳ್ಮೆಯಿಂದ ಸಹಿಸಿಕೋ.


ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ಇದಲ್ಲದೆ, ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ.


ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.


ಮಾತಾಡುವೆನು ನಿನ್ನ ಆಜ್ಞೆಗಳ ವಿಷಯವಾಗಿ I ಅರಸುಗಳ ಮುಂದೆಯು ನಿಸ್ಸಂಕೋಚವಾಗಿ II


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು