Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:9 - ಕನ್ನಡ ಸತ್ಯವೇದವು C.L. Bible (BSI)

9 ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾನ್ ಅಮ್ಕಾ ಬಚಾವ್ ಕರುನ್ ಅಪ್ನಾಚಿ ಸ್ವತಾಚಿ ಲೊಕಾ ಹೊವ್‍ಸಾಟ್ನಿ ಬಲ್ವುಲ್ಯಾನಾಯ್. ಅಮಿ ಕರಲ್ಲ್ಯಾ ಬರ್‍ಯಾ ಕಾಮಾಸಾಟ್ನಿ ನ್ಹಯ್, ಅಪ್ನಾಚ್ಯಾ ಸ್ವತಾಚ್ಯಾ ಉದ್ದೆಶಾನ್ ಅನಿ ಕುರ್ಪೆನ್ ತೆನಿ ಹೆ ಸಗ್ಳೆ ಕರ್‍ಲ್ಯಾನ್. ಎಳ್ ಮನ್ತಲೆ ಚಾಲು ಹೊವ್ಚ್ಯಾ ಅದ್ದಿಚ್ ಕ್ರಿಸ್ತ್ ಜೆಜುಚ್ಯಾ ವೈನಾ ತೆನಿ ಹಿ ಕುರ್ಪಾ ಅಮ್ಕಾ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:9
41 ತಿಳಿವುಗಳ ಹೋಲಿಕೆ  

“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


“ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.


ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ.


ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು