Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:10 - ಕನ್ನಡ ಸತ್ಯವೇದವು C.L. Bible (BSI)

10 ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆಚ್ಯಾಸಾಟ್ನಿ ದೆವಾಚ್ಯಾ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾಸಾಟ್ನಿ ಮಿಯಾ ಹೆ ಸಗ್ಳೆ ಸೊಸ್ತಾ. ಕಶ್ಯಾಕ್ ಮಟ್ಲ್ಯಾರ್ ಜೆಜು ಕ್ರಿಸ್ತಾತ್‍ ತೆಂಕಾ ಸುಟ್ಕಾ ಗಾವುಸಾಟಿ ಅನಿ ತೆಚ್ಯಾ ವಾಂಗ್ಡಾ ಕನ್ನಾಚ್ ಸರುನಸಲ್ಲಿ ಮಹಿಮಾ ಕಮ್ವುನ್ ಘೆವ್‍ಸಾಟ್ನಿ ಮಿಯಾ ಹೆ ಸಗ್ಳೆ ಸೊಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:10
29 ತಿಳಿವುಗಳ ಹೋಲಿಕೆ  

ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಕ್ರಿಸ್ತಯೇಸುವಿನ ನಿಷ್ಠಾವಂತ ಸೈನಿಕನಂತೆ ಕಷ್ಟದುಃಖಗಳನ್ನು ತಾಳ್ಮೆಯಿಂದ ಸಹಿಸಿಕೋ.


ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.


ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.


ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


“ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ.


ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.


ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ಅದಕ್ಕೆ ಆತ, “ಅವನಾರೋ ನಾನರಿಯೆನಮ್ಮಾ,” ಎಂದು ನಿರಾಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು