Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:11 - ಕನ್ನಡ ಸತ್ಯವೇದವು C.L. Bible (BSI)

11 ಈ ಮಾತು ನಂಬತಕ್ಕದ್ದಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಮಾತು ನಂಬತಕ್ಕದ್ದಾಗಿದೆ, ಏನಂದರೆ - ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದು ನಂಬತಕ್ಕ ವಾಕ್ಯವಾಗಿದೆ: ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರಿ ಖಾತ್ರಿಚಿ ಸಾಂಗ್ನಿ ಕಾಯ್ ಮಟ್ಲ್ಯಾರ್, “ಅಮಿ ತೆಚ್ಯಾ ವಾಂಗ್ಡಾ ಮರ್ಲ್ಯಾಂವ್ ತರ್ ತೆಚ್ಯಾ ವಾಂಗ್ಡಾ ಜಿವನ್ ಕರ್‍ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:11
12 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ.


ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಯೇಸುಕ್ರಿಸ್ತರು ಮರಳಿ ಬರುವಾಗ, ನಾವು ಮೃತರಾಗಿದ್ದರೂ ಜೀವಂತವಾಗಿದ್ದರೂ ಅವರೊಡನೆಯೇ ನಾವು ಜೀವಿಸಬೇಕೆಂದೆ ನಮಗಾಗಿ ಅವರು ಸಾವನ್ನಪ್ಪಿದರು.


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು