Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:12 - ಕನ್ನಡ ಸತ್ಯವೇದವು C.L. Bible (BSI)

12 ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಆಕ್ರಿಕ್ ಪತರ್ ಕಸ್ಟ್ ಸೊಸುನ್ ಘೆತಲೆ ಹೊಲ್ಯಾರ್ ಅಮಿ ತೆಚ್ಯಾ ವಾಂಗ್ಡಾ ರಾಜ್ವಟ್ ಚಾಲ್ವುತಾಂವ್, ಅಮಿ ತೆಕಾ ತಿರಸ್ಕಾರ್ ಕರ್ಲ್ಯಾರ್, ತೊಬಿ ಅಮ್ಕಾ ತಿರಸ್ಕಾರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:12
29 ತಿಳಿವುಗಳ ಹೋಲಿಕೆ  

ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ಸರಿಯೆ, ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ನುಡಿದನು. ಅದರಂತೆಯೇ ಉಳಿದ ಶಿಷ್ಯರೂ ದನಿಗೂಡಿಸಿದರು.


ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.


ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ನನ್ನ ಪಿತನು ನನಗೆ ರಾಜ್ಯಾಧಿಕಾರವನ್ನು ವಹಿಸಿರುವಂತೆ ನಾನೂ ನಿಮಗೆ ವಹಿಸುತ್ತೇನೆ.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು