Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:13 - ಕನ್ನಡ ಸತ್ಯವೇದವು C.L. Bible (BSI)

13 ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿ ಎಕ್ ಎಳಾರ್ ಗೊಸ್ಟಿಕ್ ಚುಕ್ಲ್ಯಾರ್‍ಬಿ, ತೊ ಗೊಸ್ಟಿಕ್ ವಿಶ್ವಾಸಾನ್ ರ್‍ಹಾತಾ. ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾಚ್ ವಿಶಯಾತ್ ವಿರೊದ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:13
11 ತಿಳಿವುಗಳ ಹೋಲಿಕೆ  

ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಅವರಲ್ಲಿ ಕೆಲವರು ಅಪ್ರಾಮಾಣಿಕರಾಗಿ ನಡೆದುಕೊಂಡಿದ್ದರೆ ಏನಾಯಿತು? ದೇವರ ಪ್ರಾಮಾಣಿಕತನಕ್ಕೆ ಭಂಗಬರಲು ಸಾಧ್ಯವೆ?


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ನಿಮ್ಮನ್ನು ಕರೆದ ದೇವರು ಇದನ್ನು ಈಡೇರಿಸುವರು; ಏಕೆಂದರೆ, ದೇವರು ನಂಬಿಕಸ್ಥರು.


ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು