Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:18 - ಕನ್ನಡ ಸತ್ಯವೇದವು C.L. Bible (BSI)

18 ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಸತ್ಯಭ್ರಷ್ಟರಾಗಿ ಕೆಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹೆನಿ ಖರಿ ವಾಟ್ ಸೊಡುನ್ ದಿಲ್ಯಾನಾತ್ ಅನಿ ಅಮ್ಚೆ ಅನಿಪರ್‍ತುನ್ ಝಿತ್ತೆ ಹೊತಲೆ ಹೊವ್ನ್ ಸರ್ಲೆ ಮನುನ್ ಸಾಂಗುನ್, ಸುಮಾರ್ ಲೊಕಾಂಚೊ ವಿಶ್ವಾಸ್ ಹಾಲಿ ಸರ್ಕೊ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:18
16 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?


ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.


ಎಂತಲೇ ಆ ಜನರ ವಿರುದ್ಧ ಕೆರಳಿ ಇಂತೆಂದನು: ಹಾದಿ ತಪ್ಪಿದ ಹೃದಯಿಗಳು ಇವರೆಂದಿಗೂ, ಗ್ರಹಿಸಿಕೊಳ್ಳರಿವರು ಎನ್ನ ಮಾರ್ಗವನು


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯದ ಮಾರ್ಗವನ್ನು ಬಿಟ್ಟು ತಪ್ಪಿಹೋದಾಗ ಇನ್ನೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ,


ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.


ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.


ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು