Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:19 - ಕನ್ನಡ ಸತ್ಯವೇದವು C.L. Bible (BSI)

19 ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ದೆವಾನ್ ಘಾಟಲ್ಲೊ ಪಾಯಾ ಕೊನಾಕ್‍ಬಿ ಹಾಲ್ವುಕ್ ಹೊಯ್ನಾ ಅನಿ ತ್ಯಾ ಪಾಯಾಚ್ಯಾ ವರ್‍ತಿ, ಅಪ್ನಾಚೆ ಕೊನ್ ಮನುನ್ ಸರ್ವೆಸ್ವರ್ ವಳಕ್ತಾ, ಅನಿ ಎಗ್ದಾ “ಸರ್ವೆಸ್ವರಾಚೆ ನಾವ್ ಅಪ್ನಾಚ್ಯಾ ತೊಂಡಾನ್ ಸಾಂಗ್ತಲೊ, ಬುರ್ಶ್ಯಾಪಾನಾತ್ನಾ ಧುರ್ ರ್‍ಹಾಂವ್ದಿತ್. ಮನುನ್ ತೆಚೆ ವರ್ತಿ ಲಿವಲ್ಲೆ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:19
69 ತಿಳಿವುಗಳ ಹೋಲಿಕೆ  

ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.


ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ I ಪ್ರಭುವಿಗೆ ಗೊತ್ತು ಅವರ ಬಾಳಿನಂತ್ಯ II


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಛರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


ಹೀಗೆ, ಅವರು ತಮ್ಮ ಭವಿಷ್ಯಜೀವನಕ್ಕೆ ಭದ್ರವಾದ ಬುನಾದಿಯಾಗಬಲ್ಲ ನಿಧಿಯನ್ನು ಕೂಡಿಸಿಕೊಳ್ಳಬೇಕೆಂದು ವಿಧಿಸು. ಆಗ ಅವರು ಶಾಶ್ವತ ಜೀವವನ್ನು ಪಡೆಯುವರು.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಅಷ್ಟುಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ,” ಎಂದನು.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಅಚಲನಾಗಿರುವನು ನೀತಿವಂತನು I ಮರೆಯಲಾರರು ಎಂದಿಗೂ ಆತನನು II


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.


ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.


ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ !


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್‍ಚಕ್ರವರ್ತಿಯವು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು