2 ತಿಮೊಥೆಯನಿಗೆ 2:21 - ಕನ್ನಡ ಸತ್ಯವೇದವು C.L. Bible (BSI)21 ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹೀಗಿರಲಾಗಿ ಒಬ್ಬನು ತನ್ನ ದುಷ್ಕೃತ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಹೆಚ್ಯಾಸಾಟ್ನಿ ಜೊ ಕೊನ್ ಅಪ್ನಾಚಿ ಬುರ್ಶಿ ಕಾಮಾ ಸೊಡುನ್ ಅಪ್ನಾಕುಚ್ ಪವಿತ್ರ್ ಕರ್‍ತಾ, ತೊ ಬರ್‍ಯಾ ವಿಶೆಸ್ ಕಾಮಾತ್ನಿ ಉಪಯೊಗಾಕ್ ಪಡ್ತಲೆ ಆಯ್ದಾನ್ ಹೊತಾ. ಕಶ್ಯಾಕ್ ಮಟ್ಲ್ಯಾರ್, ತೊ ಧನಿಯಾಕ್ ಒಪ್ಸುನ್ ದಿಲ್ಲೊ ಹೊತಾ. ಹರಿಎಕ್ ಮೊಟ್ಯಾ ಮೊಟ್ಯಾ ಬರ್‍ಯಾ ಕಾಮಾಕ್ನಿ ಉಪಯೊಗಾಕ್ನಿ ಪಡ್ತಲೆ ಆಯ್ದಾನ್ ತೊ ಹೊತಾ. ಅಧ್ಯಾಯವನ್ನು ನೋಡಿ |