Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:23 - ಕನ್ನಡ ಸತ್ಯವೇದವು C.L. Bible (BSI)

23 ಮೂರ್ಖ ಹಾಗೂ ಅನರ್ಥ ವಾಗ್ವಾದಗಳು ಜಗಳಕ್ಕೆ ಕಾರಣಗಳು. ಅವುಗಳ ಗೊಡವೆ ನಿನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಪಿಶೆಪಾನಾಚ್ಯಾ ಅನಿ ಅರ್ಥ್ ನಸಲ್ಲ್ಯಾ ಗೊಸ್ಟಿಯಾನಿತ್ನಾ ಚುಕ್ವುನ್ ಘೆವ್ನ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ತ್ಯಾ ಗೊಸ್ಟಿಯಾ ಫಕತ್ ಝಗ್ಡ್ಯಾಂಚ್ಯಾ ವಾಂಗ್ಡಾಚ್ ಮುಗಸ್ತ್ಯಾತ್ ಮನುನ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:23
7 ತಿಳಿವುಗಳ ಹೋಲಿಕೆ  

ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.


ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.


ಪ್ರಾಪಂಚಿಕ ಹರಟೆಗಳಿಂದ ದೂರವಿರು. ಅವುಗಳಲ್ಲಿ ಕಾಲಹರಣ ಮಾಡುವವರು ದೇವರಿಂದ ದೂರಸರಿಯುತ್ತಾರೆ.


ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.


ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.


ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು