Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:24 - ಕನ್ನಡ ಸತ್ಯವೇದವು C.L. Bible (BSI)

24 ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕರ್ತನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ಕೇಡನ್ನು ಸಹಿಸಿಕೊಳ್ಳುವವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಧನಿಯಾಚೊ ಸೆವಕ್ ಹೊಲ್ಲೊ ತಿಯಾ ಝಗ್ಡೆ ಕರುಚೆ ನ್ಹಯ್, ತಿಯಾ ಸಗ್ಳ್ಯಾಂಚ್ಯಾ ವಾಂಗ್ಡಾ ಸೊಸುನ್ ಘೆವ್ನ್ ಚಲುಚೆ, ಎಕ್ ಬರೊ ಅನಿ ಶಾಂತ್‍ಮನಾಚೊ ಗುರು ಹೊವ್ಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:24
31 ತಿಳಿವುಗಳ ಹೋಲಿಕೆ  

ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ.


ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ಮಾರನೆಯ ದಿನ ಇಬ್ಬರು ಇಸ್ರಯೇಲರೇ ಜಗಳವಾಡುತ್ತಿರುವುದನ್ನು ಕಂಡನು. ಮೋಶೆ ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದನು. ಅವರಿಗೆ, ‘ಗೆಳೆಯರೇ, ನೀವು ಸಹೋದರರಲ್ಲವೆ? ಹೀಗೇಕೆ ಕಿತ್ತಾಡುತ್ತಿದ್ದೀರಿ?’ ಎಂದು ಸಮಾಧಾನ ಪಡಿಸಲು ಯತ್ನಿಸಿದನು.


ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ.


ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.


ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?


ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.


ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು.


ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:


ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು