Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:25 - ಕನ್ನಡ ಸತ್ಯವೇದವು C.L. Bible (BSI)

25 ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಿಯಾ ತುಜ್ಯಾ ವಿರೊದ್ಯಾಕ್ನಿ ಬುದ್‍ಬಾಳ್ ಸಾಂಗ್ತಾನಾ ಥಂಡ್‍ಪಾನಾನ್ ಅನಿ ಸಂಬಾಳುನ್ ಘೆವ್ನ್ ವ್ಹಾಕ್ಡೆ ಗೆಲ್ಲ್ಯಾಕ್ನಿ ಬರ್‍ಯಾ ವಾಟೆಕ್ ಹಾನ್ತಲೊ ಹೊವ್ಚೆ. ಹೆಚ್ಯಾ ವೈನಾ ದೆವಾನ್ ತೆಂಕಾ ತೆಂಚಿ ಪಾಪಾ ವಳ್ಕುನ್ ಘೆವ್ನ್ ಮನಾ ಬದ್ಲುನ್ ಬರ್‍ಯಾ ವಾಟೆಕ್ ಯೆಯ್ ಸರ್ಕೆ ಕರ್ಲ್ಯಾರ್ಬಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:25
30 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ಆ ಮಹಿಳೆಯರಾದರೋ ಯಾರಿಗೆ ಬೇಕಾದರೂ ಕಿವಿಗೊಡುವರು. ಸತ್ಯವನ್ನು ಮಾತ್ರ ಮನಗಾಣರು.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.


“ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು