Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟು ಅದರ ನಿಯಮಗಳನ್ನು ಪಾಲಿಸದಿದ್ದರೆ ಬಹುಮಾನ ಗಳಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಯಾವನಾದರೂ ರಂಗಸ್ಥಳದಲ್ಲಿ ಎದುರಾಳಿನೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಯಾವನಾದರೂ ಆಟದ ಸ್ವರ್ಧೆಯಲ್ಲಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ, ಅವನು ಜಯಶಾಲಿಯ ಕಿರೀಟ ಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ ಪಳಾತಲ್ಯಾ ಖೆಳಾತ್ ಬಾಗ್ ಘೆಟಲ್ಲೊ ಖೆಳ್‍‍ಗಾಡಿ ನಿರ್ದಾರ್ ಕರಲ್ಲ್ಯಾ ನಿಯಮಾ ಸರ್ಕೆ ಖೆಳುಕ್‍ ಪಾಜೆ ಅನಿ ಮುಕುಟ್ ಜಿಕುನ್ ಘೆವ್ಚೆ ಹೊಲ್ಯಾರ್, ಖೆಳಾಚ್ಯಾ ನೆಮಾಕ್ ಪಾಳುಕುಚ್ ಪಾಜೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:5
14 ತಿಳಿವುಗಳ ಹೋಲಿಕೆ  

ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ;


ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು