Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:2 - ಕನ್ನಡ ಸತ್ಯವೇದವು C.L. Bible (BSI)

2 ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಲೊಕಾ ಸ್ವಾರ್ಥಿ, ಪೈಶ್ಯಾಂಚಿ ಆಶಾ ಕರ್‍ತಲಿ, ಬಡಾಯ್ ಬೊಲ್ತಲಿ, ಅನಿ ಅಪ್ನಿಚ್ ಮೊಟೊ ಮನ್ತಲೆ; ಅನಿ ದುಸ್ರ್ಯಾಂಚೆ ಬುರ್ಶೆ ಬೊಲ್ತಲಿ, ಬಾಯ್-ಬಾಬಾಕ್ ನಿಂದ್ಯಾ ಕರ್‍ತಲಿ ಅನಿ ತೆನಿ ಹುಕುಮಾಕ್ನಿ ಕಾನ್ ದಿ ನಸ್ತಾನಾ ರ್‍ಹಾತಲೆ ಅನಿ ಪವಿತ್ರ್ ಹೊವ್ನ್ ಚಲಿನಸಲ್ಲಿ, ಉಪ್ಕಾರ್ ಕರಲ್ಲೆ ಇಸರ್ತಲಿ, ದೆವಸ್ಪಾನ್‍ನಸಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:2
43 ತಿಳಿವುಗಳ ಹೋಲಿಕೆ  

ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಆದರೆ ನೀವು ಅಹಂಭಾವದಿಂದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚಿಕೊಳ್ಳುವುದು ಸರಿಯಲ್ಲ.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಹೀಗಿರಲಾಗಿ, ಕಡಿದುಹಾಕಿದ ರೆಂಬೆಗಳಂತಿರುವ ಇಸ್ರಯೇಲರನ್ನು ಕಡೆಗಣಿಸುತ್ತಾ ಹೆಮ್ಮೆಪಡಬೇಡ. ಹೆಮ್ಮೆಪಟ್ಟರೂ ನೀನು ಕೇವಲ ರೆಂಬೆ ಮಾತ್ರ. ಬೇರಿಗೆ ಆಧಾರ ನೀನಲ್ಲ. ನಿನಗೆ ಆಧಾರ ಬೇರು ಎಂಬುದನ್ನು ನೆನಪಿನಲ್ಲಿಡು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.


ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.


ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.


ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.


ಇನ್ನು ಅವನು ತನ್ನ ತಂದೆ ತಾಯಿಗಳನ್ನು ಗೌರವಿಸಬೇಕಾಗಿಲ್ಲ, ಎಂದು ಬೋಧಿಸುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನೇ ನಿರರ್ಥಕಮಾಡಿಬಿಟ್ಟಿದ್ದೀರಿ.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು