Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:3 - ಕನ್ನಡ ಸತ್ಯವೇದವು C.L. Bible (BSI)

3 ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವಭಯವಿಲ್ಲದವರೂ ಮಮತೆಯಿಲ್ಲದವರೂ ಸಮಾಧಾನವಾಗದವರೂ ಚಾಡಿಹೇಳುವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೇದನ್ನು ಪ್ರೀತಿಸದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇತರರನ್ನು ಪ್ರೀತಿಸದವರಾಗಿರುತ್ತಾರೆ; ಕ್ಷಮಿಸದವರಾಗಿರುತ್ತಾರೆ; ದೂಷಿಸುವವರಾಗಿರುತ್ತಾರೆ. ತಮ್ಮ ಮೇಲೆ ತಮಗೇ ಹತೋಟಿಯಿಲ್ಲದವರಾಗಿರುತ್ತಾರೆ; ಉತ್ತಮವಾದದ್ದನ್ನು ದ್ವೇಷಿಸುವವರಾಗಿರುತ್ತಾರೆ; ಕೋಪಿಷ್ಠರಾಗಿರುತ್ತಾರೆ; ಸಂಕುಚಿತ ಗುಣವುಳ್ಳವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದಯಾಮಾಯಾ ನಸಲ್ಲಿ, ಸಮಾದಾನ್ ನಸಲ್ಲಿ, ಚಾಡಿಯಾಳಿ, ಕಟೊರ್, ರಾಗಿಸ್ಟ್ , ಬರೆ ಹೊತ್ತೆ ಧುರ್ ಕರ್‍ತಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:3
31 ತಿಳಿವುಗಳ ಹೋಲಿಕೆ  

“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ಮಾತ್ರವಲ್ಲ, ಅವರು ಅವಿವೇಕಿಗಳು, ಅಪ್ರಾಮಾಣಿಕರು, ನಿಷ್ಕರುಣಿಗಳು ಮತ್ತು ನಿರ್ದಯಿಗಳು.


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.


ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.


ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ.


ಆ ಮೃಗದ ವಿಗ್ರಹಕ್ಕೆ ಜೀವಶ್ವಾಸವನ್ನೂದಿ ಮಾತಾಡುವಂತೆಯೂ ಆ ವಿಗ್ರಹವನ್ನು ಆರಾಧಿಸದವರನ್ನು ಕೊಲ್ಲುವಂತೆಯೂ ಎರಡನೆಯ ಮೃಗಕ್ಕೆ ಅನುಮತಿಯನ್ನು ಕೊಡಲಾಯಿತು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು;ಸದ್ಬೋಧಕಿಯರಾಗಿರಬೇಕೆಂದು ವಿಧಿಸು.


ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಅವರಿಗೆ ಸಂಯಮ ಇಲ್ಲದಿದ್ದರೆ ಮದುವೆಮಾಡಿಕೊಳ್ಳಲಿ. ಕಾಮತಾಪದಿಂದ ಬೆಂದುಹೋಗುವುದಕ್ಕಿಂತ ಮದುವೆಮಾಡಿಕೊಳ್ಳುವುದೇ ಲೇಸು.


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.


ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು