Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:5 - ಕನ್ನಡ ಸತ್ಯವೇದವು C.L. Bible (BSI)

5 ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹಿ ಲೊಕಾ ದೆವಸ್ಪಾನಾಚೊ ಭಾಯ್ಲೆ ಸಗ್ಳಿ ಕಾಮಾ ಯೆವ್ಡೆಚ್ ಕರ್‍ತ್ಯಾತ್, ತೆಚೊ ಭುತ್ತುರ್‍ಲೊ ಖರೊ ಬಳ್ ಸೊಡುನ್ ದಿತಲ್ಯಾ ಅಸ್ಲ್ಯಾ ಲೊಕಾನಿಕ್ನಾ ತಿಯಾ ಧುರುಚ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:5
20 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ಪ್ರಾಪಂಚಿಕ ಹರಟೆಗಳಿಂದ ದೂರವಿರು. ಅವುಗಳಲ್ಲಿ ಕಾಲಹರಣ ಮಾಡುವವರು ದೇವರಿಂದ ದೂರಸರಿಯುತ್ತಾರೆ.


ಮೂರ್ಖ ಹಾಗೂ ಅನರ್ಥ ವಾಗ್ವಾದಗಳು ಜಗಳಕ್ಕೆ ಕಾರಣಗಳು. ಅವುಗಳ ಗೊಡವೆ ನಿನಗೆ ಬೇಡ.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.


ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು