Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:1 - ಕನ್ನಡ ಸತ್ಯವೇದವು C.L. Bible (BSI)

1 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಅನಿ ಕ್ರಿಸ್ತ್ ಜೆಜುಚ್ಯಾ ಇದ್ರಾಕ್ ತೊ ಝಿತ್ತ್ಯಾಂಚಿ ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಾ, ಕಶ್ಯಾಕ್ ಮಟ್ಲ್ಯಾರ್ ತೊ ರಾಜಾ ಹೊವ್ನ್ ರಾಜ್ ಚಾಲ್ವುಕ್ ಯೆತಾ. ಮಿಯಾ ತುಕಾ ಗಂಬಿರ್ ರಿತಿನ್ ಹುಕುಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:1
35 ತಿಳಿವುಗಳ ಹೋಲಿಕೆ  

ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.


“ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ.


ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ.


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು