Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:11 - ಕನ್ನಡ ಸತ್ಯವೇದವು C.L. Bible (BSI)

11 ಲೂಕನು ಮಾತ್ರ ನನ್ನ ಜೊತೆಯಿದ್ದಾನೆ, ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ನನಗೆ ಸೇವೆಗಾಗಿ ಉಪಯುಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲೂಕನೊಬ್ಬನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ನೀನು ಬರುವಾಗ ಮಾರ್ಕನನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಬಾ. ಅವನು ನನ್ನ ಸೇವೆಗೆ ಸಹಾಯ ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಲುಕ್ ಮಾಜ್ಯಾ ವಾಂಗ್ಡಾಚ್ ಹಾಯ್. ತಿಯಾ ಯೆತಾನಾ, ಮಾರ್ಕಾಕ್‍ಬಿ ತುಜ್ಯಾ ವಾಂಗ್ಡಾ ಬಲ್ವುನ್ ಘೆವ್ನ್ ಯೆ, ತೊ ಮಾಜ್ಯಾ ಸೆವೆಚ್ಯಾ ಕಾಮಾತ್ ಮಾಕಾ ಉಪಯೊಗಾಕ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:11
15 ತಿಳಿವುಗಳ ಹೋಲಿಕೆ  

ಹೀಗೆ ತನ್ನ ಪರಿಸ್ಥಿತಿಯನ್ನು ಅರಿತ ಬಳಿಕ ಪೇತ್ರನು ಮರಿಯ ಎಂಬುವಳ ಮನೆಗೆ ಹೋದನು. ಈಕೆ ‘ಮಾರ್ಕ’ ಎಂದು ಹೆರಸರುಗೊಂಡಿದ್ದ ಯೊವಾನ್ನನ ತಾಯಿ. ಆ ಮನೆಯಲ್ಲಿ ಹಲವಾರು ಜನರು ಸೇರಿ ಪ್ರಾರ್ಥನೆ ಮಾಡುತ್ತಿದ್ದರು.


ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು.


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ನಮ್ಮ ಪ್ರಿಯ ವೈದ್ಯನಾದ ಲೂಕನೂ ದೇಮಾಸನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು.


ನಿಮ್ಮ ಹಾಗೆ ದೇವರಿಂದ ಆಯ್ಕೆಯಾದ ಬಾಬಿಲೋನಿನಲ್ಲಿರುವ ಸಭೆ ನಿಮಗೆ ವಂದನೆಗಳನ್ನು ತಿಳಿಸುತ್ತದೆ. ಅಂತೆಯೇ, ನನ್ನ ಮಗನಂತಿರುವ ಮಾರ್ಕನು ನಿಮ್ಮನ್ನು ವಂದಿಸಿದ್ದಾನೆ.


ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.


“ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು,” ಎಂದರು.


ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.


ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ಮಾರ್ಕನೆಂದು ಹೆಸರುಗೊಂಡ ಯೊವಾನ್ನನನ್ನು ತಮ್ಮ ಸಂಗಡ ಕರೆದುಕೊಂಡು ಹೋಗಬೇಕೆಂಬುದು ಬಾರ್ನಬನ ಇಷ್ಟವಾಗಿತ್ತು.


ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು