Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾಕಾ ಪಯ್ಲೆಪಟಿ ಇಚಾರ್ನಿ ಕರುಕ್ ಇಬೆ ಕರಲ್ಲ್ಯಾ ತನ್ನಾ ಕೊನ್‍ಬಿ ಮಾಜ್ಯಾ ಪಕ್ಷಾತ್ ಇಬೆ ರ್‍ಹಾವ್ಕ್ ನಾ. ಸಗ್ಳ್ಯಾಬಿನಿ ಮಾಕಾ ಸೊಡುನ್ ಸೊಡ್ಲ್ಯಾನಿ. ಹೆಚೆಸಾಟ್ನಿ ದೆವ್ ತೆಂಕಾ ಚುಕಿದಾರ್ ಕರುನಸುಂದಿತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:16
16 ತಿಳಿವುಗಳ ಹೋಲಿಕೆ  

ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನ ಮಾಡಿದರು.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.


ನನ್ನನ್ನು ಟೀಕಿಸುವವರಿಗೆ ನನ್ನ ಉತ್ತರ ಇದು:


ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು